Advertisement

ಅಪಘಾತದಲ್ಲಿ ಗಾಯಗೊಂಡ ಮಹಿಳೆಗೆ ಅಕ್ಕ ಪಡೆ ಸಿಬ್ಬಂದಿಯಿಂದ ತಕ್ಷಣ ನೆರವು-Akka Pade Staff Provide Immediate Assistance to Woman Injured in Road Accident

SUDDILIVE || SHIVAMOGGA

ಅಪಘಾತದಲ್ಲಿ ಗಾಯಗೊಂಡ ಮಹಿಳೆಗೆ ಅಕ್ಕ ಪಡೆ ಸಿಬ್ಬಂದಿಯಿಂದ ತಕ್ಷಣ ನೆರವು-Akka Pade Staff Provide Immediate Assistance to Woman Injured in Road Accident   

Akka, pade

ಶಿವಮೊಗ್ಗದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಮಹಿಳೆಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಅಕ್ಕ ಪಡೆ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.

ನ. 24, 2026ರಂದು ಅಕ್ಕ ಪಡೆ ಸಿಬ್ಬಂದಿಯವರು ಎಲ್.ಬಿ.ಎಸ್. ನಗರದ ಕಡೆ ಗಸ್ತು ಕರ್ತವ್ಯ ನಿರ್ವಹಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೆಚ್ಚಿನ ಜನರು ಸೇರಿರುವುದನ್ನು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮಹಿಳೆಯೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವುದು ಕಂಡುಬಂದಿದೆ.

ಗಾಯಗೊಂಡ ಮಹಿಳೆಯನ್ನು ವಿಚಾರಿಸಿದಾಗ, ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಅಪಘಾತದಿಂದ ಗಾಯಗೊಂಡು ರಸ್ತೆಯಲ್ಲಿ ಸಂಕಷ್ಟದಲ್ಲಿದ್ದ ಮಹಿಳೆಗೆ ತಕ್ಷಣ ನೆರವು ನೀಡಲು ಅಕ್ಕ ಪಡೆ ಸಿಬ್ಬಂದಿ ಮುಂದಾಗಿದ್ದಾರೆ.

ಅಕ್ಕ ಪಡೆ ಸಿಬ್ಬಂದಿಯಾದ ಹೇಮಾವತಿ WASI, ಆಕಾಂಕ್ಷಾ ರವಿ WPC, ಸುಪ್ರಿಯ ಕೆ. WHG ಹಾಗೂ ವಿದ್ಯಾಶ್ರೀ ಕೆ. WHG ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಘಟನೆ ಕುರಿತು ಸಂಚಾರ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಗಾಯಗೊಂಡ ಮಹಿಳೆಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಟ್ರೋ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಅಪಘಾತದ ಸಂದರ್ಭದಲ್ಲಿ ಗಾಯಾಳುವಿಗೆ ತಕ್ಷಣ ನೆರವು ನೀಡುವ ಮೂಲಕ ಅಕ್ಕ ಪಡೆ ಸಿಬ್ಬಂದಿ ತಮ್ಮ ಕರ್ತವ್ಯಪ್ರಜ್ಞೆ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಸಾರ್ವಜನಿಕರಿಂದಲೂ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Akka Pade Staff Provide Immediate Assistance to Woman Injured in Road Accident

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು