SUDDILIVE || SHIVAMOGGA
ಆಯನೂರು ಬಳಿ ಅಪಘಾತ: ಬೈಕ್ ಸವಾರ ವಿದ್ಯುತ್ ಪ್ರಸರ ನಿಗಮದ ಲೈನ್ಮನ್ ದುರ್ಮ*ಣ- Accident Near Ayanur: KEB Lineman Riding Bike D*es
ಶಿವಮೊಗ್ಗ: ಕರ್ತವ್ಯ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ಕೆಇಬಿ ಲೈನ್ಮನ್ವೊಬ್ಬರು ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಆಯನೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹನುಮಂತನಹಳ್ಳಿ ಗ್ರಾಮದ ಹನುಮಂತಪ್ಪ ಅವರ ಪುತ್ರ ತಿರುಮಲೇಶ್ ರೆಡ್ಡಿ (31) ಎಂದು ಗುರುತಿಸಲಾಗಿದೆ.
ತಿರುಮಲೇಶ್ ರೆಡ್ಡಿ ಅವರು ಕಳೆದ 11 ವರ್ಷಗಳಿಂದ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಕೆಇಬಿ ಲೈನ್ಮನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಸುಮಾರು 7 ಗಂಟೆಯ ವೇಳೆಗೆ ರಾತ್ರಿ ಕರ್ತವ್ಯ ಮುಗಿಸಿಕೊಂಡು ತಮ್ಮ ಬೈಕ್ನಲ್ಲಿ ಹಾರನಹಳ್ಳಿಗೆ ಹಿಂದಿರುಗುತ್ತಿದ್ದರು.
ಈ ವೇಳೆ ಆಯನೂರು ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಾಯರ್ ಪೆಟ್ರೋಲ್ ಬಂಕ್ನಿಂದ ಸ್ವಲ್ಪ ಮುಂದೆ ತೆರಳುತ್ತಿದ್ದಾಗ ಯಾವುದೋ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ತಿರುಮಲೇಶ್ ರೆಡ್ಡಿ ಅವರು ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Accident Near Ayanur: KEB Lineman Riding Bike D*es




0 ಕಾಮೆಂಟ್ಗಳು