Advertisement

ಭದ್ರಾ ನಾಲೆಗಳಿಗೆ 20 ದಿನ ನೀರು ಹರಿಸಲು ಆಗ್ರಹ: ನ. 30ರಂದು ಶಿವಮೊಗ್ಗದಲ್ಲಿ ರಸ್ತೆ ಬಂದ್- Demand to release water to Bhadra canals for 20 days: Road closure in Shivamogga on Nov. 30

 SUDDILIVE || SHIVAMOGGA

ಭದ್ರಾ ನಾಲೆಗಳಿಗೆ 20 ದಿನ ನೀರು ಹರಿಸಲು ಆಗ್ರಹ: ನ. 30ರಂದು ಶಿವಮೊಗ್ಗದಲ್ಲಿ ರಸ್ತೆ ಬಂದ್- Demand to release water to Bhadra canals for 20 days: Road closure in Shivamogga on Nov. 30  
Bhadra, canal


ಶಿವಮೊಗ್ಗ: ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸುವಂತೆ ಆಗ್ರಹಿಸಿ, ನವೆಂಬರ್ 30ರಂದು ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣಾ ಸಮಿತಿ ವತಿಯಿಂದ ರೈತ ಸಂಘದ ಸಂಸ್ಥಾಪಕ ಸದಸ್ಯ ಕೆ.ಟಿ. ಗಂಗಾಧರ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ನೀರಿನ ಅಗತ್ಯವಿದೆ. ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರು ಹರಿಸದಿರುವುದರಿಂದ ರೈತರ ಕೃಷಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಎರಡೂ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ರೈತರ ನೀರಿನ ಹಕ್ಕು ಮತ್ತು ಕೃಷಿ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸ್ಪಂದಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಂಜುನಾಥೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Demand to release water to Bhadra canals for 20 days: Road closure in Shivamogga on Nov. 30

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು