Advertisement

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ: ₹20 ಲಕ್ಷ ಮೌಲ್ಯದ ಚಿನ್ನಾಭರಣ ವಶ-House Theft Case Solved in Bhadravathi: Gold Jewellery Worth ₹20 Lakh Seized

 SUDDILIVE || BHADRAVATHI

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ: ₹20 ಲಕ್ಷ ಮೌಲ್ಯದ ಚಿನ್ನಾಭರಣ ವಶ-House Theft Case Solved in Bhadravathi: Gold Jewellery Worth ₹20 Lakh Seized   

House, theft

ಭದ್ರಾವತಿ: ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಭದ್ರಾವತಿ ಹೊಸಮನೆ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನೂ ಅಭಿರಕ್ಷೆಗೆ ಪಡೆಯಲಾಗಿದೆ.

ಭದ್ರಾವತಿ ಬೋವಿ ಕಾಲೋನಿಯ ನಿವಾಸಿ ಮಹಿಳೆಯೊಬ್ಬರು 2026ರ ನವೆಂಬರ್ 14ರಂದು ಮನೆಯ ಬೀರುವನ್ನು ಪರಿಶೀಲಿಸಿದಾಗ, ಅದರಲ್ಲಿದ್ದ ಸುಮಾರು 200 ಗ್ರಾಂ ಚಿನ್ನ ಹಾಗೂ 128 ಗ್ರಾಂ ಬೆಳ್ಳಿಯ ಆಭರಣಗಳು ಕಳ್ಳತನವಾಗಿರುವುದು ಗಮನಕ್ಕೆ ಬಂದಿತ್ತು. ಈ ಕುರಿತು ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 196/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 305ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಭದ್ರಾವತಿ ನಗರ ವೃತ್ತ ನಿರೀಕ್ಷಕರಾದ ನಾಗಮ್ಮ ಕೆ. ಅವರು ಕೈಗೊಂಡಿದ್ದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ, ಭದ್ರಾವತಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಪ್ಪ ಎಂ.ಪಿ. ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಆದರ್ಶ ಶೆಟ್ಟಿ, ಕಾಂತರಾಜ ಬಿ.ಎನ್., ಬಸವರಾಜ ನಾಯ್ಕ, ಹಣಮಂತ ಅಮಾತಿ, ರಾಘವೇಂದ್ರ, ವಿಶ್ವನಾಥ, ವಿಶಾಲಾಕ್ಷಿ, ಮಂಜುಳಾ ಹಾಗೂ ಮಾರುತಿ ಪಾಟೀಲ್ ಅವರು ತನಿಖಾ ತಂಡದಲ್ಲಿದ್ದರು.

ತನಿಖೆ ಮುಂದುವರಿಸಿದ ಪೊಲೀಸರು ನವೆಂಬರ್ 27ರಂದು ಭದ್ರಾವತಿಯ ಭೂತನಗುಡಿ ನಿವಾಸಿ ನಂಜುಂಡ ಟಿ. ಅಲಿಯಾಸ್ ಬಕ್ರಿ (23), ತುಕ್ಕೋಜಿರಾವ್ ಅವರ ಪುತ್ರನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಅಭಿರಕ್ಷೆಗೆ ಪಡೆಯಲಾಗಿದೆ.


ಬಂಧಿತ ನಂಜುಂಡನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂ. ಮೌಲ್ಯದ 167 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಅವರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

House Theft Case Solved in Bhadravathi: Gold Jewellery Worth ₹20 Lakh Seized 

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು