Advertisement

ಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ- No reason will be given for privatization of Shivamogga Airport: Minister Madhu Bangarappa

 SUDDILIVE || SHIVAMOGGA

ಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ- No reason will be given for privatization of Shivamogga Airport: Minister Madhu Bangarappa  
Airport, shivamogga


ಬೆಂಗಳೂರು:
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಬಿಟ್ಟುಕೊಡುವುದಿಲ್ಲ. ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲ ಸಹಕಾರವನ್ನೂ ನೀಡುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಉಡಾನ್ ಯೋಜನೆ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಾಗಿದ್ದು, ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಬೇಕಿದೆ. ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ ಎಂದರು.

ಸುಮಾರು 200 ಕೋಟಿ ರೂ. ವೆಚ್ಚದ ಯೋಜನೆಯಾಗಿ ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಅಂತಿಮವಾಗಿ ಸುಮಾರು 600 ಕೋಟಿ ರೂ. ವೆಚ್ಚವಾಗಿದೆ. ರಾಜ್ಯ ಸರ್ಕಾರದ ಶ್ರಮ ಮತ್ತು ಹಣದಿಂದ ನಿರ್ಮಾಣಗೊಂಡ ಯೋಜನೆಯನ್ನು ಬಳಿಕ ಸ್ಥಗಿತಗೊಳಿಸುವ ಹಂತಕ್ಕೆ ತಂದು ಅಂಬಾನಿ, ಅದಾನಿ ಅವರಂತಹ ಖಾಸಗಿ ಉದ್ಯಮಿಗಳಿಗೆ ಮಾರಾಟ ಮಾಡುವ ಉದ್ದೇಶ ಬಿಜೆಪಿಗಿದೆ ಎಂದು ಆರೋಪಿಸಿದರು.

ಈ ಸಂಬಂಧ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೂ ಚರ್ಚಿಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ಪ್ರಚಾರ ಪಡೆದುಕೊಂಡರು. ಆದರೆ ಉದ್ಘಾಟನೆಯ ನಂತರ ಆರಂಭದಲ್ಲಿ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ಬಳಿಕ ರಾಜ್ಯ ಸರ್ಕಾರವೇ ಪ್ರಯತ್ನ ನಡೆಸಿ ವಿಮಾನ ಸಂಚಾರ ಆರಂಭಿಸಲು ಶ್ರಮಿಸಿತು ಎಂದು ಹೇಳಿದರು.

ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

ಹಿರಿಯೂರು ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಯಾವುದೇ ತಂತ್ರ, ಹುನ್ನಾರ ರೂಪಿಸಿದರೂ ಅಂತಿಮವಾಗಿ ಗೆಲುವು ಕಾಂಗ್ರೆಸ್ ಪಕ್ಷದ್ದೇ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

No reason will be given for privatization of Shivamogga Airport: Minister Madhu Bangarappa

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು