Advertisement

ಶಿವಮೊಗ್ಗ ಜಿಲ್ಲೆಯಲ್ಲಿ 383 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ-Applications invited for 383 Anganwadi posts in Shivamogga district

 SUDDILIVE || SHIVAMOGGA

ಶಿವಮೊಗ್ಗ ಜಿಲ್ಲೆಯಲ್ಲಿ 383 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ-Applications invited for 383 Anganwadi posts in Shivamogga district 
Anganwadi, worker


ಶಿವಮೊಗ್ಗ: ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಒಟ್ಟು 383 ಖಾಲಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಏಳು ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ.

ತಾಲೂಕುವಾರು ಖಾಲಿ ಹುದ್ದೆಗಳ ವಿವರ ಹೀಗಿದೆ:

  • ಭದ್ರಾವತಿ: 8 ಕಾರ್ಯಕರ್ತೆಯರು, 34 ಸಹಾಯಕಿಯರು.
  • ಹೊಸನಗರ: 6 ಕಾರ್ಯಕರ್ತೆಯರು, 46 ಸಹಾಯಕಿಯರು.
  • ಸಾಗರ: 4 ಕಾರ್ಯಕರ್ತೆಯರು, 37 ಸಹಾಯಕಿಯರು.
  • ಶಿಕಾರಿಪುರ: 4 ಕಾರ್ಯಕರ್ತೆಯರು, 30 ಸಹಾಯಕಿಯರು.
  • ಶಿವಮೊಗ್ಗ: 19 ಕಾರ್ಯಕರ್ತೆಯರು, 54 ಸಹಾಯಕಿಯರು.
  • ಸೊರಬ: 6 ಕಾರ್ಯಕರ್ತೆಯರು, 30 ಸಹಾಯಕಿಯರು.
  • ತೀರ್ಥಹಳ್ಳಿ: 12 ಕಾರ್ಯಕರ್ತೆಯರು, 42 ಸಹಾಯಕಿಯರು.

ಒಟ್ಟಾರೆ 59 ಅಂಗನವಾಡಿ ಕಾರ್ಯಕರ್ತೆ ಹಾಗೂ 273 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 20ರಿಂದ ಡಿಸೆಂಬರ್ 19ರೊಳಗೆ ಸಲ್ಲಿಸಬೇಕು ಎಂದು ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂರವಾಣಿ ಸಂಖ್ಯೆ 08182-2955514 ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for 383 Anganwadi posts in Shivamogga district 

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು