Advertisement

ಆಶ್ರಯ ಮನೆಗಳ ನಿರ್ಮಾಣ-ಹಂಚಿಕೆಗೆ ಕಾಲಮಿತಿ ನಿಗದಿಪಡಿಸಿ; ಕೊಳಗೇರಿ ಮೂಲಸೌಕರ್ಯಕ್ಕೆ ಅನುದಾನ ನೀಡಿ: ವಸತಿ ಸಚಿವ ಜಮೀರ್ ಅಹ್ಮದ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ- Set a deadline for the construction and distribution of shelter homes; provide grants for slum infrastructure: MLA S.N. Channabasappa appeals to Housing Minister Zameer Ahmed

SUDDILIVE || SHIVAMOGGA

Ashraya, house

ಶಿವಮೊಗ್ಗ: "ಶಿವಮೊಗ್ಗ ನಗರದ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದ್ದು, ಮನೆಗಳ ನಿರ್ಮಾಣ ಮತ್ತು ಹಂಚಿಕೆ ಪ್ರಕ್ರಿಯೆಗೆ ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಬೇಕು ಹಾಗೂ ನಗರದ ಕೊಳಗೇರಿ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು," ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯದ ವಸತಿ ಸಚಿವರಾದ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದ ಶಾಸಕರು, ಶಿವಮೊಗ್ಗ ನಗರದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.

"ಶಿವಮೊಗ್ಗ ನಗರದಲ್ಲಿ ಸ್ವಂತ ಸೂರಿಲ್ಲದ ಸಾವಿರಾರು ಬಡ ಕುಟುಂಬಗಳು ಆಶ್ರಯ ಮನೆಗಳಿಗಾಗಿ ಕಾಯುತ್ತಿವೆ. ಮನೆಗಳ ಕಾಮಗಾರಿ ವಿಳಂಬವಾಗುತ್ತಿರುವುದರಿAದ ಫಲಾನುಭವಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ, ಕಾಮಗಾರಿಯನ್ನು ತ್ವರಿತಗೊಳಿಸಿ ಮನೆಗಳ ನಿರ್ಮಾಣ ಮತ್ತು ಅರ್ಹರಿಗೆ ಮನೆಗಳ ಹಂಚಿಕೆಗೆ ಸ್ಪಷ್ಟ ಕಾಲಮಿತಿಯನ್ನು ನಿಗದಿಪಡಿಸಬೇಕು. ಇದರೊಂದಿಗೆ, ನಗರದ ಕೊಳಗೇರಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡಬೇಕು" ಎಂದು ಶಾಸಕ ಚನ್ನಬಸಪ್ಪ ಅವರು ವಸತಿ ಸಚಿವರಲ್ಲಿ ಮನವಿ ಮಾಡಿದ್ದಾರೆ.

Set a deadline for the construction and distribution of shelter homes; provide grants for slum infrastructure: MLA S.N. Channabasappa appeals to Housing Minister Zameer Ahmed

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು