Advertisement

ವೀರಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ, ರಾಗಿ ದಾಸ್ತಾನು ಪತ್ತೆ; 166 ಕ್ವಿಂಟಾಲ್ ಜಪ್ತಿ-Illegal Ration Rice and Ragi Stockpile Discovered in Veerapura; 166 Quintals Seized

 SUDDILIVE || SHIVAMOGGA

ವೀರಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ, ರಾಗಿ ದಾಸ್ತಾನು ಪತ್ತೆ; 166 ಕ್ವಿಂಟಾಲ್ ಜಪ್ತಿ-Illegal Ration Rice and Ragi Stockpile Discovered in Veerapura; 166 Quintals Seized  

Illegal, rice



ಭದ್ರಾವತಿ: ಸ್ಥಳೀಯ ಗ್ರಾಮಸ್ಥರ ದೂರಿನ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ಮತ್ತು ರಾಗಿ ದಾಸ್ತಾನನ್ನು ಜಪ್ತಿ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿರುವ ಹಬೀಬ್ ಖಾನ್ ಅವರಿಗೆ ಸೇರಿದ ಗೋಡೌನ್ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ದಾಳಿ ವೇಳೆ ಗೋಡೌನ್‌ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 83 ಕ್ವಿಂಟಾಲ್ ಅಕ್ಕಿ ಹಾಗೂ 83 ಕ್ವಿಂಟಾಲ್ ರಾಗಿಯನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ. ಒಟ್ಟು 166 ಕ್ವಿಂಟಾಲ್ ಆಹಾರ ಧಾನ್ಯಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಭದ್ರಾವತಿ ಗ್ರಾಮಾಂತರ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಬಸವರಾಜ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಡಿತರ ಅಕ್ಕಿ ಮತ್ತು ರಾಗಿ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

Illegal Ration Rice and Ragi Stockpile Discovered in Veerapura; 166 Quintals Seized 

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು