SUDDILIVE || SHIVAMOGGA
ಶಿವಮೊಗ್ಗದಲ್ಲಿ ಬಸ್ ದರ ಏರಿಕೆ ಖಂಡಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ
ರಾಜ್ಯ ಸರ್ಕಾರ ಸಾರಿಗೆ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸ್ವಾಭಿಮಾನಿ ಬಣ ಕಿರಣ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರು ಜಮಾಯಿಸಿದ ಕಾರ್ಯಕರ್ತರು, ಬಸ್ ತಡೆದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಬಸ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದ್ದು, ಜನರ ಜೇಬಿಗೆ ಕನ್ನ ಹಾಕಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಾರಿಗೆ ಬಸ್ ದರ ಏರಿಕೆಯನ್ನು ತಕ್ಷಣವೇ ವಾಪಸ್ ಪಡೆಯಬೇಕು. ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕುವ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು ಎಂದು ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಒತ್ತಾಯಿಸಿದರು.
ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿದರು.
shivamogga bus fare hike protest karave swabhimani bana
