ಶಿವಮೊಗ್ಗದತ್ತ ಬರುತ್ತಿದ್ದ ಕಾರು ಅಪಘಾತ –ಎಂಡಿ ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ-Car accident on its way to Shimoga - MD student dies; four injured

 SUDDILIVE || AGUMBE

ಶಿವಮೊಗ್ಗದತ್ತ ಬರುತ್ತಿದ್ದ ಕಾರು ಅಪಘಾತ –ಎಂಡಿ ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ-Car accident on its way to Shimoga - MD student dies; four injured   



ಶಿವಮೊಗ್ಗ: ಮುಂಜಾನೆ ಆಗುಂಬೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.

Agumbe, accident

ನವೆಂಬರ್ 1ರ ಮುಂಜಾನೆ ಸುಮಾರು 5.45ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಐವರು ವೈದ್ಯಕೀಯ ವಿದ್ಯಾರ್ಥಿಗಳು ಕಾರಿನಲ್ಲಿ ಶಿವಮೊಗ್ಗದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಜಾನೆಯ ಮಂಜು ಅಥವಾ ರಸ್ತೆಯಲ್ಲಿ ಅಡ್ಡ ಬಂದ ಯಾವುದಾದರೂ ಕಾರಣದಿಂದ ಅಪಘಾತ ಸಂಭವಿಸಿರಬಹುದೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.


ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಮೂಲದ 28 ವರ್ಷದ ಡಾ.ಚೇತನ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಸಿಮ್ಸ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಕಾರಿನಲ್ಲಿದ್ದ ಉಳಿದ ನಾಲ್ವರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಮತ್ತು ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Car accident on its way to Shimoga - MD student dies; four injured   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close