Advertisement

ರಸ್ತೆ ದಾಟಲು ನಿಂತಿದ್ದ ವೃದ್ಧನಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಪಾದಚಾರಿ ಸಾವು-Bike hits elderly man standing to cross road; pedestrian dies on the spot

 SUDDILIVE || SHIVAMOGGA

ರಸ್ತೆ ದಾಟಲು ನಿಂತಿದ್ದ ವೃದ್ಧನಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಪಾದಚಾರಿ ಸಾವು-Bike hits elderly man standing to cross road; pedestrian dies on the spot   
Bike, accident

ಶಿವಮೊಗ್ಗ: ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ನಗರದ ಹರಿಗೆಯ ಬಿ.ಹೆಚ್. ರಸ್ತೆಯಲ್ಲಿ ಸಂಭವಿಸಿದೆ.

ಹರಿಗೆ ನಿವಾಸಿ ಜಯಣ್ಣ (62) ಮೃತಪಟ್ಟ ದುರ್ದೈವಿ. ಇವರು ಬಿ.ಹೆಚ್. ರಸ್ತೆಯಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಆಶಿಶ್ ಕೆ. ಶ್ಯಾಮ್ ಎಂಬುವವರು ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಜಯಣ್ಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ದೂರು ನೀಡಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಬೈಕ್ ಸವಾರ ಆಶಿಶ್ ಕೆ. ಶ್ಯಾಮ್ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ರಸ್ತೆ ದಾಟುವ ಸಂದರ್ಭದಲ್ಲಿ ಸಂಭವಿಸಿದ ಈ ಅಪಘಾತದಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Bike hits elderly man standing to cross road; pedestrian dies on the spot

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು