Advertisement

ಶಿವಮೊಗ್ಗದಲ್ಲಿ 57 ಆರೋಗ್ಯ ಇಲಾಖೆ ಹುದ್ದೆಗಳ ತಾತ್ಕಾಲಿಕ ಪ್ರಥಮ ಆಯ್ಕೆಪಟ್ಟಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ- Provisional first selection list for 57 health department posts in Shivamogga published; Objections invited

 SUDDILIVE || SHIVAMOGGA 

ಶಿವಮೊಗ್ಗದಲ್ಲಿ 57 ಆರೋಗ್ಯ ಇಲಾಖೆ ಹುದ್ದೆಗಳ ತಾತ್ಕಾಲಿಕ ಪ್ರಥಮ ಆಯ್ಕೆಪಟ್ಟಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ- Provisional first selection list for 57 health department posts in Shivamogga published; Objections invited   
Health, department


ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಪ್ರಥಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.

ಜಿಲ್ಲೆಯಲ್ಲಿ ಖಾಲಿಯಿರುವ 15 ಶುಶ್ರೂಷಾಧಿಕಾರಿ, 18 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 24 ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಪ್ರಥಮ ಆಯ್ಕೆಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆಯ್ಕೆಪಟ್ಟಿಯಲ್ಲಿ ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ ಅರ್ಜಿದಾರರು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ನವೆಂಬರ್ 27ರಿಂದ 29ರವರೆಗಿನ ರಜಾದಿನಗಳು ಸೇರಿದಂತೆ ನವೆಂಬರ್ 30ರಂದು ಮಧ್ಯಾಹ್ನ 3 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 08182-222382 ಸಂಪರ್ಕಿಸಬಹುದಾಗಿದೆ.

Provisional first selection list for 57 health department posts in Shivamogga published; Objections invited

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು