Advertisement

ವರದಕ್ಷಿಣೆ ಕಿರುಕುಳ: ಪತಿಗೆ 3 ವರ್ಷ ಜೈಲು ಶಿಕ್ಷೆ; ₹14 ಸಾವಿರ ದಂಡ-Dowry harassment: Husband sentenced to 3 years in prison; fined ₹14,000

 SUDDILIVE || SHIVAMOGGA

ವರದಕ್ಷಿಣೆ ಕಿರುಕುಳ: ಪತಿಗೆ 3 ವರ್ಷ ಜೈಲು ಶಿಕ್ಷೆ; ₹14 ಸಾವಿರ ದಂಡ-Dowry harassment: Husband sentenced to 3 years in prison; fined ₹14,000
Court, judgement


ಶಿವಮೊಗ್ಗ:
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ದೈಹಿಕ ಹಾಗೂ ಮಾನಸಿಕ ಹಿಂಸೆ ಮತ್ತು ಕೊಲೆ ಬೆದರಿಕೆ ಹಾಕಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಟಿಪ್ಪುನಗರ ನಿವಾಸಿ ಮಹಮ್ಮದ್ ಇರ್ಷಾದ್‌ಗೆ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ಹಾಗೂ ₹14,000 ದಂಡ ವಿಧಿಸಿದೆ.

ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಸಿದ್ಧರಾಜು ಎನ್.ಕೆ. ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ.


2023ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಮ್ಮದ್ ಇರ್ಷಾದ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 498(ಎ), 323, 324, 504 ಹಾಗೂ 506ರ ಅಡಿಯಲ್ಲಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪತಿಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

Dowry harassment: Husband sentenced to 3 years in prison; fined ₹14,000

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು