Advertisement

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ತಂದೆಯ ಮೇಲೆ ಚಾಕು ಹಲ್ಲೆ; ಇಬ್ಬರಿಗೆ ಜೈಲು ಶಿಕ್ಷೆ- Shivamogga: Minor girl molested, father attacked with knife; Two sentenced to prison

SUDDILIVE || SHIVAMOGGA

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ತಂದೆಯ ಮೇಲೆ ಚಾಕು ಹಲ್ಲೆ; ಇಬ್ಬರಿಗೆ ಜೈಲು ಶಿಕ್ಷೆ- Shivamogga: Minor girl molested, father attacked with knife; Two sentenced to prison  


ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಾಲಕಿಯ ತಂದೆಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಶಿಕ್ಷೆ ವಿಧಿಸಿದೆ.

16 ವರ್ಷದ ಬಾಲಕಿಗೆ 27 ವರ್ಷದ ಮೊದಲನೇ ಆರೋಪಿಯು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ್ದನು. ಈ ವಿಚಾರಕ್ಕೆ ಬಾಲಕಿಯ ತಂದೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಮೊದಲನೇ ಆರೋಪಿ ಮತ್ತೊಬ್ಬ 27 ವರ್ಷದ ಎರಡನೇ ಆರೋಪಿಯೊಂದಿಗೆ ಸೇರಿ ಬಾಲಕಿಯ ತಂದೆಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು.

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಕೊಲೆಗೆ ಯತ್ನ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಉಪನಿರೀಕ್ಷಕ ಶಿವಪ್ರಸಾದ್ ವಿ. ಅವರು ತನಿಖೆ ಪೂರ್ಣಗೊಳಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಆರೋಪಿಗಳ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಎ1 ಆರೋಪಿಗೆ ಐಪಿಸಿ ಕಲಂ 354(ಎ), 448, 307 ಸಹಿತ 34 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8ರಡಿ 4 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1,21,000 ದಂಡ ವಿಧಿಸಲಾಗಿದೆ.

ಎ2 ಆರೋಪಿಗೆ ಐಪಿಸಿ ಕಲಂ 448, 307 ಸಹಿತ 34ರಡಿ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹41,000 ದಂಡ ವಿಧಿಸಲಾಗಿದೆ.

ನೊಂದ ಬಾಲಕಿಗೆ ಆರೋಪಿಗಳಿಂದ ವಸೂಲಿಯಾಗುವ ದಂಡದ ಮೊತ್ತದಲ್ಲಿ ₹1 ಲಕ್ಷ ಹಾಗೂ ಸರ್ಕಾರದ ವತಿಯಿಂದ ₹10,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

Shivamogga: Minor girl molested, father attacked with knife; Two sentenced to prison  

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು