SUDDILIVE || SHIVAMOGGA
ಶಿವಮೊಗ್ಗದಲ್ಲಿ ನ.12 ಮತ್ತು 14ರಂದು ವಿದ್ಯುತ್ ವ್ಯತ್ಯಯ; ಸಾರ್ವಜನಿಕರಿಗೆ ಮೆಸ್ಕಾಂ ಮನವಿ-Power outage in Shivamogga on November 12 and 14; MESCOM appeals to the public
ಶಿವಮೊಗ್ಗ: ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವುದರಿಂದ ನವೆಂಬರ್ 12 ಮತ್ತು 14ರಂದು ಸಿದ್ಧರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಎರಡೂ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಾಮಗಾರಿ ಪೂರ್ಣಗೊಳ್ಳುವವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
Power outage in Shivamogga on November 12 and 14; MESCOM appeals to the public



0 ಕಾಮೆಂಟ್‌ಗಳು