SUDDILIVE || SHIVAMOGGA
ನ.21ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-Power outage in these areas of Shivamogga on November 21st
ಶಿವಮೊಗ್ಗ: ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 21ರಂದು ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನ.21ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬನಶಂಕರಿ ದೇವಸ್ಥಾನ ರಸ್ತೆ, ಚರ್ಚ್ ಕಾಂಪೌಂಡ್, ಟ್ಯಾಂಕ್ ಬಂಡ್ ರಸ್ತೆ, ಮೀನಾಕ್ಷಿ ಭವನ ಹಾಗೂ ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಮಗಾರಿಗೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



0 ಕಾಮೆಂಟ್‌ಗಳು