SUDDILIVE || SHIVAMOGGA
ಶಿವಮೊಗ್ಗದಲ್ಲಿ ನ.25ರಂದು 7 ಗಂಟೆ ವಿದ್ಯುತ್ ವ್ಯತ್ಯಯ: ನಗರದ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತ-7-Hour Power Cut in Shivamogga on November 25: Electricity Supply to Be Disrupted in Several Areas
ಶಿವಮೊಗ್ಗ: ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 25ರಂದು ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್ ಸೇರಿದಂತೆ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅದೇ ರೀತಿ, ಬಿ.ಹೆಚ್. ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ. ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದುನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ ಹಾಗೂ ಟ್ಯಾಂಕ್ ಬೌಂಡ್ ರಸ್ತೆಯಲ್ಲಿಯೂ ವಿದ್ಯುತ್ ಪೂರೈಕೆ ಇರುವುದಿಲ್ಲ.
ಇದರ ಜೊತೆಗೆ ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳು, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ವ್ಯತ್ಯಯವಾಗಲಿದೆ.
ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ನಿಗದಿತ ಅವಧಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.
Hour Power Cut in Shivamogga on November 25: Electricity Supply to Be Disrupted in Several Areas



0 ಕಾಮೆಂಟ್ಗಳು