Advertisement

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಮದುವೆಯಾದ ಒಂದೂವರೆ ತಿಂಗಳಲ್ಲೇ ನವದಂಪತಿ ದುರ್ಮರಣ!Horrific road accident in Shivamogga: Newlywed couple dies within a month and a half of their marriage!

 SUDDILIVE || SHIVAMOGGA

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಮದುವೆಯಾದ ಒಂದೂವರೆ ತಿಂಗಳಲ್ಲೇ ನವದಂಪತಿ ದುರ್ಮರಣ!Horrific road accident in Shivamogga: Newlywed couple dies within a month and a half of their marriage!  
Road, accident

ಶಿವಮೊಗ್ಗ: ಮದುವೆಯಾಗಿ ಕೇವಲ ಒಂದೂವರೆ ತಿಂಗಳಷ್ಟೇ ಕಳೆದಿದ್ದ ನವದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದ ಸಾಗರ ರಸ್ತೆ ಸಮೀಪದ ರಿಂಗ್ ರೋಡ್‌ನಲ್ಲಿ ಸಂಭವಿಸಿದೆ. ನವಜೀವನದ ಕನಸು ಕಾಣುತ್ತಿದ್ದ ದಂಪತಿ ಅಪಘಾತದಲ್ಲಿ ಬಲಿಯಾಗಿದ್ದು, ಎರಡೂ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಿರಣ್ ಜಿ. (28) ಹಾಗೂ ಅವರ ಪತ್ನಿ ಸೌಮ್ಯ (22) ಎಂದು ಗುರುತಿಸಲಾಗಿದೆ. ಕಿರಣ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಲಭ್ಯವಾದ ಮಾಹಿತಿ ಪ್ರಕಾರ, ಕಿರಣ್ ಅವರು ತಮ್ಮ ಪತ್ನಿ ಸೌಮ್ಯ ಅವರೊಂದಿಗೆ ಶರಾವತಿ ನಗರದ ಮನೆಯಿಂದ ಗೋವಿಂದಪುರದಲ್ಲಿರುವ ಪತ್ನಿಯ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾಗರ ರಸ್ತೆ ಬಳಿಯ ರಿಂಗ್ ರೋಡ್‌ನಲ್ಲಿ ಅವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Road, accident

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಕಿರಣ್ ಹಾಗೂ ಸೌಮ್ಯ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮದುವೆಯಾಗಿ ಒಂದೂವರೆ ತಿಂಗಳಿನಲ್ಲೇ ದಂಪತಿ ಸಾವನ್ನಪ್ಪಿರುವುದು ಕುಟುಂಬಸ್ಥರು, ಸಂಬಂಧಿಕರು ಹಾಗೂ ಪರಿಚಿತರಲ್ಲಿ ತೀವ್ರ ದುಃಖ ಉಂಟುಮಾಡಿದೆ.

ಮದುವೆಯ ಸಂಭ್ರಮದಿಂದ ಇನ್ನೂ ಹೊರಬರದಿದ್ದ ಎರಡೂ ಕುಟುಂಬಗಳಿಗೆ ಈ ಘಟನೆ ಬರಸಿಡಿಲಿನಂತೆ ಅಪ್ಪಳಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿಯೂ ಘಟನೆ ತೀವ್ರ ಆಘಾತ ಮೂಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Horrific road accident in Shivamogga: Newlywed couple dies within a month and a half of their marriage!  

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು