ರೌಡಿಶೀಟರ್ ಶ್ಯಾಡೋ ಸಚಿನ್‌ಗೆ ದೀಪಾವಳಿ ಗಿಫ್ಟ್ ನೀಡಿದ ಶಿವಮೊಗ್ಗ ಪೊಲೀಸರು-Diwali gift for rowdy sheeter Sachin Sadao

 SUDDILIVE || SHIVAMOGGA

ರೌಡಿಶೀಟರ್ ಶ್ಯಾಡೋ ಸಚಿನ್‌ಗೆ ದೀಪಾವಳಿ ಗಿಫ್ಟ್ ನೀಡಿದ ಶಿವಮೊಗ್ಗ ಪೊಲೀಸರು-Diwali gift for rowdy sheeter Sachin Sadao    

Shadow, sachin



ಶಿವಮೊಗ್ಗ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರೌಡಿಶೀಟರ್ ಶ್ಯಾಡೋ ಸಚಿನ್‌ಗೆ ಶಿವಮೊಗ್ಗ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿಶೀಟರ್ ಸಚಿನ್ ಎಂ.ಎಸ್. ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದಾರೆ.

ಶಿವಮೊಗ್ಗದ ಗ್ರಾಮಾಂತರ, ಜಯನಗರ, ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್ ಠಾಣೆಗಳಲ್ಲಿ ಸಚಿನ್ ವಿರುದ್ಧ ಕೊಲೆ ಯತ್ನ, ಸುಲಿಗೆ, ಗಾಂಜಾ ಸಾಗಾಣಿಕೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದವು. ವಿನೋಬನಗರ ಹಾಗೂ ಆನಂದಪುರ ಪೊಲೀಸ್ ಠಾಣೆಗಳಲ್ಲೂ ಆತನ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿದ್ದವು.


ನಿರಂತರ ಅಪರಾಧ ಚಟುವಟಿಕೆಗಳ ಮೂಲಕ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುತ್ತಿದ್ದ ಹಿನ್ನೆಲೆಯಲ್ಲಿ ಸಚಿನ್ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಪೊಲೀಸರು ವರದಿ ಸಲ್ಲಿಸಿದ್ದರು. ಪೊಲೀಸರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಬಂಧನಕ್ಕೆ ಆದೇಶ ನೀಡಿದ್ದರು.

ಜಿಲ್ಲಾಧಿಕಾರಿಗಳ ಆದೇಶದಂತೆ ಆರೋಪಿ ಸಚಿನ್ ಎಂ.ಎಸ್. ಅಲಿಯಾಸ್ ಶ್ಯಾಡೋ ಸಚಿನ್‌ನನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.

ದೀಪಾವಳಿ ಹಬ್ಬದ ಸಮಯದಲ್ಲೇ ರೌಡಿಶೀಟರ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ ಇದೀಗ ಗಮನ ಸೆಳೆದಿದೆ.

Diwali gift for rowdy sheeter Sachin Sadao


Post a Comment

ನವೀನ ಹಳೆಯದು