SUDDILIVE || SHIVAMOGGA
ಶಿವಮೊಗ್ಗ: ಸಾಗರ ಸಮೀಪ ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ, ಮಗುವಿಗೆ ಗಾಯ- Shivamogga: Private bus and car collide head-on near Sagar, child injured
ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ದಾಸಕೊಪ್ಪ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಆನಂದಪುರದಿಂದ ಸಾಗರದತ್ತ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ವೇಳೆ ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಮುಖಾಮುಖಿ ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಪುಟ್ಟ ಮಗುವಿಗೆ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
ಘಟನೆ ತಿಳಿದ ಕೂಡಲೇ ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


ಕಾಮೆಂಟ್ ಪೋಸ್ಟ್ ಮಾಡಿ