SUDDILIVE || SHIVAMOGGA
ಶಿವಮೊಗ್ಗದಲ್ಲಿ SBI ಬ್ಯಾಂಕ್ ಮ್ಯಾನೇಜರ್ ಮನೆಗೆ ಕನ್ನ: ₹11.35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು-SBI Bank Manager's house burgled in Shivamogga: Gold jewellery worth ₹11.35 lakh stolen
ಶಿವಮೊಗ್ಗ: ನಗರದ ಗೋಪಾಳದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ಮ್ಯಾನೇಜರ್ ಅವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಸುಮಾರು ₹11.35 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ.
ಮಲ್ಲಿಕಾರ್ಜುನ ಬಡಾವಣೆಯ ಮೇಘನಾ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕುಟುಂಬ ಸಮೇತ ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿ ಆಭರಣಗಳನ್ನು ದೋಚಿದ್ದಾರೆ ಎನ್ನಲಾಗಿದೆ.
ನವೆಂಬರ್ 8ರಂದು ಮನೆಯಲ್ಲಿದ್ದ ಲಾಕರ್ ಪರಿಶೀಲಿಸಿದಾಗ ಆಭರಣಗಳು ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಕಳ್ಳತನವಾಗಿರುವ ವಸ್ತುಗಳಲ್ಲಿ ಚಿನ್ನದ ಸರಗಳು, ಬಳೆಗಳು, 10 ಚಿನ್ನದ ನಾಣ್ಯಗಳು ಹಾಗೂ ಬೆಳ್ಳಿಯ ಗಣೇಶ ಮೂರ್ತಿ ಸೇರಿದಂತೆ ಒಟ್ಟು ₹11.35 ಲಕ್ಷ ಮೌಲ್ಯದ ವಸ್ತುಗಳು ಸೇರಿವೆ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಗಮನಾರ್ಹ ಅಂಶವೆಂದರೆ, ಕಳ್ಳರು ಮನೆಯ ಬಾಗಿಲು, ಕಿಟಕಿ ಅಥವಾ ಲಾಕರ್ಗಳನ್ನು ಮುರಿಯದೆ ಆಭರಣಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಯಾವುದೇ ಬಲವಂತದ ಪ್ರವೇಶದ ಗುರುತುಗಳು ಕಂಡುಬಾರದ ಹಿನ್ನೆಲೆಯಲ್ಲಿ, ಮನೆಯ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರುವ ಪರಿಚಿತರೇ ಕೃತ್ಯ ಎಸಗಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮನೆಯವರಿಗೆ ಪರಿಚಿತರಾಗಿರುವವರ ಮಾಹಿತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
SBI Bank Manager's house burgled in Shivamogga: Gold jewellery worth ₹11.35 lakh stolen



0 ಕಾಮೆಂಟ್ಗಳು