Advertisement

ಶಿವಮೊಗ್ಗ- ಪ್ರಾವಿಷನ್ ಸ್ಟೋರ್‌ನಲ್ಲಿ ಭಾರೀ ಅಗ್ನಿ ಅವಘಡ; ₹2 ಕೋಟಿ ಮೌಲ್ಯದ ಸಾಮಗ್ರಿಗತಡರಾತ್ರಿ ಸಂಭವಿಸಿದ ಅಗ್ನಿಅವಘಡ-ಕೋಟ್ಯಾಂತರ ರೂ. ನಷ್ಠ- Shivamogga - Massive fire breaks out at provision store; goods worth ₹2 crore gutted

 SUDDILIVE || SHIVAMOGGA

ತಡರಾತ್ರಿ ಸಂಭವಿಸಿದ ಅಗ್ನಿಅವಘಡ-ಕೋಟ್ಯಾಂತರ ರೂ. ನಷ್ಠ- Shivamogga - Massive fire breaks out at provision store; goods worth ₹2 crore gutted  
Fire, break


ಶಿವಮೊಗ್ಗ: ನಗರದ ಸಾವರ್ಕರ್ ನಗರದ ಕುಚಲಕ್ಕಿ ಕೇರಿಯಲ್ಲಿರುವ ಶ್ರೀ ಪ್ರಾವಿಷನ್ ಸ್ಟೋರ್‌ನಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು ಹಾಗೂ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.

ಅಂಗಡಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿ ಅಂಗಡಿಯಲ್ಲಿದ್ದ ದಿನಸಿ ಸಾಮಗ್ರಿಗಳು, ಪೀಠೋಪಕರಣಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಅಂಗಡಿಯು ಸತೀಶ್ ಎಂಬುವರಿಗೆ ಸೇರಿದ್ದಾಗಿದೆ.

ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಸುಮಾರು ಎರಡು ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ ಶಂಕೆ

ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣದ ಕುರಿತು ಪರಿಶೀಲನೆ ಮುಂದುವರಿದಿದೆ.

Shivamogga - Massive fire breaks out at provision store; goods worth ₹2 crore gutted  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು