Advertisement

ಸಾಗರ-ರಂಗಮಂದಿರ, ಶಾಲೆಗಳಿಗೆ ಬೆಂಕಿ – ಪೊಲೀಸರ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು; ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ-Sagar-Rangamandira, schools set on fire - villagers who had clashed with police; blocked the national highway and set tires on fire

SUDDILIVE || SAGARA

ಸಾಗರ-ರಂಗಮಂದಿರ, ಶಾಲೆಗಳಿಗೆ ಬೆಂಕಿ – ಪೊಲೀಸರ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು; ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ-Sagar-Rangamandira, schools set on fire - villagers who had clashed with police; blocked the national highway and set tires on fire    

Tumari, protest


ಶಿವಮೊಗ್ಗ: ಸಾಗರ ತಾಲೂಕಿನ ತುಮರಿ ಸಮೀಪದ ಒಳಗೆರೆ ಗ್ರಾಮದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಬೆಂಕಿ ಹಚ್ಚುತ್ತಿರುವ ದುಷ್ಕರ್ಮಿಗಳ ಕೃತ್ಯ ಖಂಡಿಸಿ ಗ್ರಾಮಸ್ಥರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 369E ತಡೆದು ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ತುಮರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಂಗಮಂದಿರ ಹಾಗೂ ಶಾಲೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿರುವ ಘಟನೆಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ. ಕಳೆದ ತಿಂಗಳಷ್ಟೇ ನವೀಕರಣಗೊಂಡಿದ್ದ ಶಾಂತವೇರಿ ಗೋಪಾಲಗೌಡ ರಂಗಮಂದಿರಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ಮಾಸುವ ಮುನ್ನವೇ ಶಾಲೆಗಳಿಗೂ ಬೆಂಕಿ ಹಚ್ಚಲು ಯತ್ನಿಸಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕರ ಬಳಕೆಗೆ ಇರುವ ರಂಗಮಂದಿರ ಹಾಗೂ ಶಾಲೆಗಳಂತಹ ಪ್ರಮುಖ ಆಸ್ತಿಪಾಸ್ತಿಗಳನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಕೃತ್ಯ ಎಸಗುತ್ತಿದ್ದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಘಟನೆಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಈವರೆಗೂ ಬಂಧಿಸದಿರುವುದೇ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಲು ಪ್ರಮುಖ ಕಾರಣವಾಗಿದೆ.

ಸಾಗರ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಬೆಂಕಿ ಹಚ್ಚುವ ದುಷ್ಕರ್ಮಿಗಳ ಅಟ್ಟಹಾಸ ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ 369E ತಡೆದು ಟೈರ್‌ಗೆ ಬೆಂಕಿ ಹಚ್ಚಿದ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ನಾಶಪಡಿಸುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಆಲಿಸಬೇಕು. ಆರೋಪಿಗಳನ್ನು ಶೀಘ್ರ ಬಂಧಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Sagar-Rangamandira, schools set on fire - villagers who had clashed with police; blocked the national highway and set tires on fire

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು