ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಏರ್ಟಿಗ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು-Shivamogga: An elderly man crossing the road was hit by an Airtiga car; he died on the spot.

 SUDDILIVE || SHIVAMOGGA

ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಏರ್ಟಿಗ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು-Shivamogga: An elderly man crossing the road was hit by an Airtiga car; he died on the spot.   
Road, accident



ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷದ ವೃದ್ಧರೊಬ್ಬರಿಗೆ ಏರ್ಟಿಗ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ವೀರಣ್ಣಬೆನವಳ್ಳಿ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ.

ಮೃತರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದ ನಿವಾಸಿ ತಿಪ್ಪೇಶಪ್ಪ (70) ಎಂದು ಗುರುತಿಸಲಾಗಿದೆ.

ತಿಪ್ಪೇಚಪ್ಪ ಅವರು ಯಾವುದೋ ಕೆಲಸದ ನಿಮಿತ್ತ ಹಾರನಹಳ್ಳಿಯಿಂದ ವೀರಣ್ಣಬೆನವಳ್ಳಿ ಗ್ರಾಮಕ್ಕೆ ಬಂದಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ತೆರಳುವ ಸಂದರ್ಭದಲ್ಲಿ  ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ಮುಂದಾಗಿದ್ದಾರೆ.

ಈ ವೇಳೆ ಅಯನೂರು ಕಡೆಯಿಂದ ಶಿವಮೊಗ್ಗದತ್ತ ವೇಗವಾಗಿ ಬರುತ್ತಿದ್ದ ಏರ್ಟಿಗ ಕಾರು, ರಸ್ತೆ ದಾಟುತ್ತಿದ್ದ ತಿಪ್ಪೇಶಪ್ಪ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಅಪಘಾತದ ವೇಳೆ ಕಾರು ಚಾಲಕ ಬ್ರೇಕ್ ಹಾಕಲು ಪ್ರಯತ್ನಿಸಿದ್ದರೂ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಕಾರು ಶಿವಮೊಗ್ಗ ನೋಂದಣಿಯದ್ದಾಗಿದ್ದು, ಆದರೆ ಚಾಲಕನ ಹೆಸರು ಹಾಗೂ ಇತರ ವಿವರಗಳು ಸದ್ಯಕ್ಕೆ ತಿಳಿದುಬಂದಿಲ್ಲ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ನಿರಂತರವಾಗಿ ಸಂಚರಿಸುವುದರಿಂದ ವೀರಣ್ಣಬೆನವಳ್ಳಿ ಕ್ರಾಸ್‌ನಲ್ಲಿ ರಸ್ತೆ ದಾಟುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ವೃದ್ಧರ ಸಾವಿನಿಂದ ಹಾರನಹಳ್ಳಿ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ಕುಂಸಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. 

Shivamogga: An elderly man crossing the road was hit by an Airtiga car; he died on the spot.  


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close