Advertisement

ಶಿವಮೊಗ್ಗದಲ್ಲಿ 3 ಕ್ಷ-ಕಿರಣ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ- Applications invited for 3 X-ray Technician posts in Shivamogga

SUDDILIVE || SHIVAMOGGA

ಶಿವಮೊಗ್ಗದಲ್ಲಿ 3 ಕ್ಷ-ಕಿರಣ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ- Applications invited for 3 X-ray Technician posts in Shivamogga  

Xray, technician




10ನೇ ತರಗತಿ, ಡಿಪ್ಲೊಮಾ ಅಥವಾ ಪಿಯುಸಿ ವಿಜ್ಞಾನ ವಿದ್ಯಾರ್ಹತೆ ಹೊಂದಿರುವವರಿಗೆ ಅವಕಾಶ; ಮಾಸಿಕ ವೇತನ ₹16,067

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕ್ಷಯರೋಗ ವಿಭಾಗದ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಾರಿಯಲ್ಲಿರುವ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಲ್ಲಿ ಖಾಲಿ ಇರುವ ಮೂರು ಕ್ಷ-ಕಿರಣ (X-Ray) ತಂತ್ರಜ್ಞರ ಹುದ್ದೆಗಳನ್ನು ಒಳಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನದ ಉದ್ದೇಶದಿಂದ ಈ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಡಿಪ್ಲೊಮಾ ಇನ್ ಎಕ್ಸರೇ ಇಮೇಜಿಂಗ್ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರಬೇಕು.

ಅಥವಾ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿ, ಡಿಪ್ಲೊಮಾ ಇನ್ ಎಕ್ಸರೇ ಅಥವಾ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರಬೇಕು.

ವೇತನ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕ್ರೋಢೀಕೃತ ವೇತನವಾಗಿ 16,067 ರೂ. ನೀಡಲಾಗುತ್ತದೆ. ಒಟ್ಟು ಮೂರು ಹುದ್ದೆಗಳನ್ನು ಒಳಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ನಮೂನೆಗಳನ್ನು 2026ರ ನವೆಂಬರ್ 13ರಿಂದ ನವೆಂಬರ್ 21ರವರೆಗೆ ವಿತರಿಸಲಾಗುತ್ತದೆ. ಪ್ರತಿದಿನ ಸಂಜೆ 4 ಗಂಟೆಯವರೆಗೆ ಮಾತ್ರ ಅರ್ಜಿ ಪಡೆಯಲು ಅವಕಾಶವಿದ್ದು, ಸರ್ಕಾರಿ ರಜಾ ದಿನಗಳಲ್ಲಿ ಅರ್ಜಿ ವಿತರಣೆ ಇರುವುದಿಲ್ಲ.

ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ಪೂರಕ ದಾಖಲೆಗಳನ್ನು ಲಗತ್ತಿಸಿ, ನವೆಂಬರ್ 21ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ, ಮೆಗ್ಗಾನ್ ಆಸ್ಪತ್ರೆ ಆವರಣ, ಶಿವಮೊಗ್ಗ. ನೇಮಕಾತಿ ಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಇದೇ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು