SUDDILIVE || ANANDAPURAM
ಶಿವಮೊಗ್ಗ: ಅಂತರ್‌ಜಿಲ್ಲಾ ಕಳ್ಳನ ಬಂಧನ-Shivamogga: Inter-District Thief Arrested
ಶಿವಮೊಗ್ಗ: ಸಾಗರ ತಾಲೂಕಿನ ಯಡೆಹಳ್ಳಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಆನಂದಪುರ ಪೊಲೀಸರು ಭೇದಿಸಿದ್ದು, ಅಂತರ್‌ಜಿಲ್ಲಾ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಮೊಹಮ್ಮದ್ ಯೂನುಸ್ ಅಲಿಯಾಸ್ ಚಾಂದು ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಸೆಪ್ಟೆಂಬರ್‌ನಲ್ಲಿ ಸಾಗರ ತಾಲೂಕಿನ ಯಡೆಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಆನಂದಪುರ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಪ್ರಕರಣದ ಜಾಡು ಹಿಡಿದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ 10ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಆನಂದಪುರ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವೈಖರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Shivamogga: Inter-District Thief Arrested



0 ಕಾಮೆಂಟ್‌ಗಳು